ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.
TSK
TSK · ಅರಣ್ಯಕಾಂಡ 11:4
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 16:3
TSK
ಯಾಜಕಕಾಂಡ 24:10
TSK
¶ ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.
ಅರಣ್ಯಕಾಂಡ 14:1
TSK
¶ ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.
ನೆಹೆಮಿಯ 13:3
TSK
ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.
ಕೀರ್ತನೆಗಳು 78:20
TSK
ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”