TSK

TSK · ಅರಣ್ಯಕಾಂಡ 12:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,

¶ ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯ ಮಗಳಾದ ಯೆಹೂದೀತಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆ ಮಾಡಿಕೊಂಡನು.

¶ ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.

ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.

¶ ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.

ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.

¶ ಅಮ್ರಾಮನ ಹೆಂಡತಿ ಯಾರೆಂದರೆ: ಐಗುಪ್ತ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ, ಮೋಶೆಯೂ ಮತ್ತು ಇವರ ಅಕ್ಕ ಮಿರ್ಯಾಮಳೂ ಹುಟ್ಟಿದರು.

ಅದಕ್ಕಾತನು ಆ ಮಾತು ಹೇಳಿದವನಿಗೆ, ‹“ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?”› ಎಂದು ಹೇಳಿ

‹ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.›