ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
TSK
TSK · ಅರಣ್ಯಕಾಂಡ 13:33
Treasury of Scripture Knowledge references in ಕನ್ನಡ IRV.
ಅರಣ್ಯಕಾಂಡ 13:22
TSK
ಏಮಿಯರು ಮೊದಲು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕೀಮ್ಯರಂತೆ ಎತ್ತರವಾದ ಪುರುಷರಾಗಿದ್ದರು.
ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
1 ಸಮುವೇಲನು 17:24
TSK
ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
2 ಸಮುವೇಲನು 21:20
TSK
¶ ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
ಯೆಶಾಯ 40:22
TSK
ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ.