TSK

TSK · ಅರಣ್ಯಕಾಂಡ 14:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.

¶ ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.

ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.

ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?

ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?

ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.

‹ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು”› ಎಂದನು.

‹ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ›

¶ ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?