TSK

TSK · ಅರಣ್ಯಕಾಂಡ 14:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ನಿಮ್ಮ ತಂದೆಯು ನನ್ನನ್ನು ವಂಚಿಸಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು, ನನಗೆ ಕೇಡುಮಾಡುವುದಕ್ಕೆ ದೇವರು ಅವನಿಗೆ ಅವಕಾಶಕೊಡಲಿಲ್ಲ.

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.

ಈವರೆಗೆ ಹತ್ತಾರು ಸಾರಿ ನನ್ನನ್ನು ಅವಮಾನಪಡಿಸಿ ನನಗೆ ಕೇಡುಮಾಡುತ್ತಿರುವುದಕ್ಕೆ ನಿಮಗೆ ನಾಚಿಕೆಯಿಲ್ಲವಲ್ಲಾ.

ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.

ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.

ಅದಕ್ಕೆ ಯೇಸು, ‹“ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” › ಅಂದನು.

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.

ಮತ್ತು ದೇವರು ನಲವತ್ತು ವರ್ಷ ಯಾರ ಮೇಲೆ ಬಹಳವಾಗಿ ಕೋಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದುಹೋದವು.