¶ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
TSK
TSK · ಅರಣ್ಯಕಾಂಡ 14:33
Treasury of Scripture Knowledge references in ಕನ್ನಡ IRV.
¶ ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”
ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.