ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
TSK
TSK · ಅರಣ್ಯಕಾಂಡ 14:45
Treasury of Scripture Knowledge references in ಕನ್ನಡ IRV.
ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು.
ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಗಳವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಾಯೇಲರ ಧೈರ್ಯ ಕುಂದಿಹೋಯಿತು.
ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.