¶ ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
TSK
TSK · ಅರಣ್ಯಕಾಂಡ 14:6
Treasury of Scripture Knowledge references in ಕನ್ನಡ IRV.
ಯೆಹೂದ ಕುಲದ ಯೆಫುನ್ನೆಯನ ಮಗನಾದ ಕಾಲೇಬ್,
¶ ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.
ಯೆಫುನ್ನೆಯ ಮಗನಾದ ಕಾಲೇಬನು ಮತ್ತು ನೂನನ ಮಗನಾದ ಯೆಹೋಶುವನು ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶವನ್ನು ಸೇರುವುದಿಲ್ಲ.
¶ ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.
¶ ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.
ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ.
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”