TSK

TSK · ಅರಣ್ಯಕಾಂಡ 15:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.

ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.

ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು.

ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

¶ ದೇಶಾಂತರದ ಸೆರೆಯಿಂದ ಹಿಂತಿರುಗಿ ಬಂದವರು ಇಸ್ರಾಯೇಲರ ದೇವರಿಗೆ ತೊಂಭತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ಸಮಸ್ತ ಇಸ್ರಾಯೇಲರ ನಿಮಿತ್ತವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗಹೋಮವೇ.