ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.
TSK
TSK · ಅರಣ್ಯಕಾಂಡ 15:3
Treasury of Scripture Knowledge references in ಕನ್ನಡ IRV.
ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
¶ “‘ಯಾರಾದರೂ ಹರಕೆಯನ್ನು ಸಲ್ಲಿಸುವುದಕ್ಕಾಗಲಿ, ಸ್ವ ಇಚ್ಛೆಯಿಂದಾಗಲಿ ಅಂತಹ ಯಜ್ಞವನ್ನು ಮಾಡಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಊಟಮಾಡಬೇಕು; ಆದರೆ ಉಳಿದದ್ದನ್ನು ಮರುದಿನದಲ್ಲಿ ತಿನ್ನಬಹುದು.
“ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ,
¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
ಆ ದಿನದಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕೋಸ್ಕರ ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಒಂದು ವರ್ಷದ ಏಳು ಕುರಿಗಳು ಇವುಗಳನ್ನೂ,
ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.