TSK

TSK · ಅರಣ್ಯಕಾಂಡ 15:30

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.

ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

¶ “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.

¶ ನಾನು ಆ ಮಾತನ್ನು ನಿಮಗೆ ತಿಳಿಸಿದರೂ, ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.

ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.

ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.

ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು, ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.

ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.

ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.

‹ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.›

ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?