TSK

TSK · ಅರಣ್ಯಕಾಂಡ 15:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;