TSK

TSK · ಅರಣ್ಯಕಾಂಡ 15:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.

ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.

ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.

ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.

ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.

ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.