TSK

TSK · ಅರಣ್ಯಕಾಂಡ 16:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›

ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.

ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.