TSK

TSK · ಅರಣ್ಯಕಾಂಡ 16:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

¶ ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ತನ್ನ ದನಗಳನ್ನು ಮೇಯಿಸಿ, ಮತ್ತೊಬ್ಬನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಭಾಗವನ್ನು ಅವನಿಗೆ ಈಡು ಕೊಡಬೇಕು.

ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.

ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.

ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.