TSK

TSK · ಅರಣ್ಯಕಾಂಡ 16:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.

“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.

ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.

ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

¶ ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.