TSK

TSK · ಅರಣ್ಯಕಾಂಡ 16:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.

ಆದರೆ ಯೆಹೋವನು ಇವರಿಗೋಸ್ಕರ ಭೂಮಿಯು ಬಾಯ್ದೆರೆದು ಇವರನ್ನೂ, ಇವರ ಸರ್ವಸ್ವವನ್ನೂ ನುಂಗಿ, ಇವರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದು ಹೇಳಿದನು.

ಆ ಗುಂಪಿನವರೆಲ್ಲರು ಸತ್ತರೂ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.

ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.

ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ.

ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

ಭೂಮಿಯು ಬಾಯ್ದೆರೆದು ದಾತಾನನನ್ನು ನುಂಗಿಬಿಟ್ಟಿತು; ಅಬಿರಾಮನ ಕಡೆಯವರನ್ನು ಮುಚ್ಚಿಬಿಟ್ಟಿತು.

ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.