TSK

TSK · ಅರಣ್ಯಕಾಂಡ 18:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.

ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.

¶ ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.

¶ “‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.

¶ “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.

ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.