TSK

TSK · ಅರಣ್ಯಕಾಂಡ 18:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.

ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.

¶ ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.

ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?