TSK

TSK · ಅರಣ್ಯಕಾಂಡ 18:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.

¶ “ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.

ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.

ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.