TSK

TSK · ಅರಣ್ಯಕಾಂಡ 18:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.

ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.

ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು.

¶ ಯಾಜಕಸೇವೆ ಮಾಡುವ ಲೇವಿಯರಿಗಾಗಲಿ ಅಥವಾ ಲೇವಿಯ ಕುಲದವರಲ್ಲಿ ಯಾರಿಗೇ ಆಗಲಿ ಇತರ ಇಸ್ರಾಯೇಲರೊಡನೆ ಸ್ವಂತಕ್ಕಾಗಿ ಪಾಲಾಗಲಿ ಅಥವಾ ಸ್ವಾಸ್ತ್ಯವಾಗಲಿ ದೊರೆಯುವುದಿಲ್ಲ. ಯೆಹೋವನಿಗೆ ಸಮರ್ಪಿಸಲ್ಪಡುವ ಹೋಮದ್ರವ್ಯಗಳೂ ಆತನಿಗೋಸ್ಕರ ಪ್ರತ್ಯೇಕಿಸಲ್ಪಟ್ಟದ್ದೆಲ್ಲವೂ ಅವರಿಗೆ ಜೀವನಾಧಾರ.

ಲೇವಿ ಕುಲದವರಿಗೆ ಮಾತ್ರ ಯಾವ ಪಾಲು ಸಿಕ್ಕಲಿಲ್ಲ. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆತನ ಯಜ್ಞಶೇಷವೇ ಅವರ ಸ್ವಾಸ್ತ್ಯವಾಗಿತ್ತು.

ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.

¶ “ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.

ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.