TSK

TSK · ಅರಣ್ಯಕಾಂಡ 19:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,

ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’

ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.

ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.

¶ ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?