TSK

TSK · ಅರಣ್ಯಕಾಂಡ 19:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.

ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.