TSK

TSK · ಅರಣ್ಯಕಾಂಡ 19:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೋರಿಯ ಮಾಂಸವನ್ನು, ಚರ್ಮವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ದೋಷಪರಿಹಾರಕ ಯಜ್ಞ.

ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.

ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;