ಅರಣ್ಯಕಾಂಡ 13:26
TSK
ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
TSK
Treasury of Scripture Knowledge references in ಕನ್ನಡ IRV.
ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
¶ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
¶ ಇಸ್ರಾಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪು ಸಮುದ್ರದ ಮಾರ್ಗವಾಗಿ ಪ್ರಯಾಣಮಾಡುವಾಗ, ದಾರಿಯಲ್ಲಿ ಆಯಾಸದಿಂದ ಅವರಿಗೆ ಬೇಸರವಾಯಿತು.
¶ ಕಾದೇಶಿನಿಂದ ಹೊರಟು ಎದೋಮ್ಯರ ದೇಶದ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
ಇದು ದಕ್ಷಿಣದ ಮೇರೆಯಾಗಿದೆ: ದಕ್ಷಿಣದ ಮೇರೆಯು ತಾಮಾರಿನಿಂದ ಹೊರಟು, ಮೆರೀಬೋತ್ ಕಾದೇಶಿನ ಹಳ್ಳದ ಮೇಲೆ ಐಗುಪ್ತದವರೆಗೆ ಮುಂದುವರೆಯುವ ನದಿಯ ಮಾರ್ಗವಾಗಿ ಮಹಾ ಸಮುದ್ರವನ್ನು ಮುಟ್ಟಬೇಕು.