¶ ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
TSK
TSK · ಅರಣ್ಯಕಾಂಡ 21:23
Treasury of Scripture Knowledge references in ಕನ್ನಡ IRV.
ಅರಣ್ಯಕಾಂಡ 20:18
TSK
ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿಮ್ಮಿಂದ ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪವಾಗಿತ್ತು; ಅದು ಈಗಾಗಲೇ ನೆರವೇರಿತಲ್ಲಾ.
ಅವರು ಯೊರ್ದನ್ ನದಿಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದರು. ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆಯೂ ಮತ್ತು ಇಸ್ರಾಯೇಲರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.
ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
ಯೆರೆಮಿಯ 48:34
TSK
ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.