TSK

TSK · ಅರಣ್ಯಕಾಂಡ 21:35

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.

ಅವರು ಅವನ ರಾಜ್ಯವನ್ನೂ, ಬಾಷಾನ್ ದೇಶದ ಅರಸನಾದ ಓಗನ ರಾಜ್ಯವನ್ನೂ ಮತ್ತು ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನು ಗೆದ್ದುಕೊಂಡಿದ್ದರು.

ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.

ಅಷ್ಟರೋತ್ ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದ ಸಲ್ಕಾ ಪಟ್ಟಣದ ವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳೂ. ಮೋಶೆ ಅವರನ್ನು ಗೆದ್ದು ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.

ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.