TSK

TSK · ಅರಣ್ಯಕಾಂಡ 21:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

ಆಗ ಇಸ್ರಾಯೇಲರ ಸಮೂಹವೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟತೊಡಗಿದರು.

ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

¶ ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.

¶ ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.

ನೀನು ಹಾಲೂ ಮತ್ತು ಜೇನೂ ಹರಿಯುವ ದೇಶದಿಂದ ಕರೆದುಕೊಂಡು ಬಂದು ನಮ್ಮನ್ನು ಮರುಭೂಮಿಯಲ್ಲಿ ಸಾಯಿಸುವುದು ನಿನಗೆ ಸಾಕಾಗಲಿಲ್ಲವೋ? ನೀನು ನಮ್ಮ ಮೇಲೆ ದೊರೆತನ ಮಾಡಬೇಕು ಎಂದು ಕೋರುತ್ತಿಯೋ?

¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.

ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?

ಹೊಟ್ಟೆತುಂಬಿದವನಿಗೆ ಜೇನುತುಪ್ಪವೂ ಅಸಹ್ಯ, ಹೊಟ್ಟೆ ಹಸಿದವನಿಗೆ ಕಹಿಯೆಲ್ಲಾ ಸಿಹಿ.