¶ ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
TSK
TSK · ಅರಣ್ಯಕಾಂಡ 22:38
Treasury of Scripture Knowledge references in ಕನ್ನಡ IRV.
ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.