ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
TSK
TSK · ಅರಣ್ಯಕಾಂಡ 23:10
Treasury of Scripture Knowledge references in ಕನ್ನಡ IRV.
ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.
¶ ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
¶ ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.