“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.
TSK
TSK · ಅರಣ್ಯಕಾಂಡ 23:24
Treasury of Scripture Knowledge references in ಕನ್ನಡ IRV.
ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
¶ ಗಾದ್ ಕುಲದವರ ವಿಷಯದಲ್ಲಿ, “ಗಾದ್ಯರ ಪ್ರದೇಶವನ್ನು ವಿಸ್ತಾರಮಾಡಿದ ಯೆಹೋವನಿಗೆ ಸ್ತೋತ್ರ. ಅವರು ಸಿಂಹದಂತೆ ಹೊಂಚಿಕೊಂಡು (ಶತ್ರುಗಳ) ಭುಜವನ್ನೂ ಅಥವಾ ಶಿರಸ್ಸನ್ನೂ ಮುರಿಯುತ್ತಾರೆ.
ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.
ಯಾವುದಕ್ಕೂ ಹೆದರಿ ಓರೆಯಾಗದ, ಮೃಗರಾಜನಾದ ಸಿಂಹ,
¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.
ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.
ಆ ವಂಶದಿಂದ ಮೂಲೆಗಲ್ಲು, ಆ ವಂಶದಿಂದ ಮೊಳೆ, ಆ ವಂಶದಿಂದ ಯುದ್ಧದ ಬಿಲ್ಲು, ಅಂತು ಆ ವಂಶದೊಳಗಿಂದ ಸಕಲ ಅಧಿಕಾರಿಗಳು ಉಂಟಾಗುವರು.
ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜನೂ ಆಗಿರುವ ಒಬ್ಬನು, ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನೂ ತೆರೆಯುವುದಕ್ಕೆ ಜಯವೀರನಾಗಿದ್ದಾನೆ” ಎಂದು ಹೇಳಿದನು.