ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.
TSK
TSK · ಅರಣ್ಯಕಾಂಡ 23:7
Treasury of Scripture Knowledge references in ಕನ್ನಡ IRV.
ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
¶ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
¶ ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.
ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.
ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.
¶ ಆಗ ಯೋಬನು ಮತ್ತೆ ಪ್ರಸ್ತಾಪಿಸಿ ಹೀಗೆಂದನು,
ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?
ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ, ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
¶ “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.
¶ “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’
ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.