TSK

TSK · ಅರಣ್ಯಕಾಂಡ 24:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.

ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.

ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.

ಜನರು ಅವನನ್ನು ನೋಡಿ ಚಪ್ಪಾಳೆಹೊಡೆದು ಛೀಮಾರಿ ಹಾಕಿ, ಆಚೆಗೆ ಹೊರಡಿಸುವರು.”

ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”