¶ ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.
TSK
TSK · ಅರಣ್ಯಕಾಂಡ 24:20
Treasury of Scripture Knowledge references in ಕನ್ನಡ IRV.
ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
ಇದಲ್ಲದೆ ಅವನು ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ ಪರಾಕ್ರಮದಿಂದ ಅವರನ್ನು ಸದೆಬಡಿದನು. ಇಸ್ರಾಯೇಲ್ಯರನ್ನು ಸುಲಿಗೆಮಾಡುವವರ ಕೈಗೆ ಸಿಕ್ಕದಂತೆ ತಪ್ಪಿಸಿದನು.
ಆ ಕಾಲದಲ್ಲಿ ಅವನೂ, ಅವನ ಜನರೂ ತೇಲಾಮಿನಿಂದ ಶೂರಿನವರೆಗೂ, ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಆಕ್ರಮಣ ಮಾಡಿ ಸುಲಿದುಕೊಳ್ಳುತ್ತಿದ್ದರು.
ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
¶ ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.