TSK

TSK · ಅರಣ್ಯಕಾಂಡ 24:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.

ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?

ನಿಮ್ಮ ದೇವರಾದ ಯೆಹೋವನು ಆ ಶಾಪಗಳನ್ನೆಲ್ಲಾ, ನಿಮ್ಮನ್ನು ದ್ವೇಷಿಸಿ ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.

ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.

ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ?

ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

¶ ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, ‹“ನೀನು ಹಿಂಸೆಪಡಿಸುವ ಯೇಸುವೇ ನಾನು;›