ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.
TSK
TSK · ಅರಣ್ಯಕಾಂಡ 27:3
Treasury of Scripture Knowledge references in ಕನ್ನಡ IRV.
ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
ಎಲೀಯಾಬನ ಮಕ್ಕಳು: ನೆಮೂವೇಲ್, ದಾತಾನ್, ಅಬೀರಾಮ್ ಎಂಬುವವರೇ. ಕೋರಹನ ಗುಂಪಿನವರು ಯೆಹೋವನಿಗೆ ವಿರುದ್ಧವಾಗಿ ವಿವಾದಿಸಿದ ಕಾಲದಲ್ಲಿ ಅವರೊಳಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ವಿವಾದಿಸಿದ ಆಲೋಚನಾಕರ್ತರಾದ ದಾತಾನ್ ಮತ್ತು ಅಬೀರಾಮರು ಇವರೇ.
ಮೋಶೆಯೂ ಮತ್ತು ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರ ಸಂಖ್ಯೆಯಲ್ಲಿ ಲೆಕ್ಕಿಸಲ್ಪಟ್ಟವರೊಳಗೆ ಒಬ್ಬರಾದರೂ ಇವರಲ್ಲಿ ಇರಲಿಲ್ಲ.
ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.
‹ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು›‹ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ”› ಎಂದು ಹೇಳಿದನು.
ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.