TSK

TSK · ಅರಣ್ಯಕಾಂಡ 28:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,

ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.

ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.

ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.

ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.

ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.

ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.

ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ.

¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.