TSK

TSK · ಅರಣ್ಯಕಾಂಡ 28:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.

ಈ ಪಶುಗಳೆಲ್ಲಾ ಪೂರ್ಣಾಂಗವಾಗಿ ಕುಂದುಕೊರತೆ ಇಲ್ಲದೆ ಇರಬೇಕು. ನಿತ್ಯ ಸರ್ವಾಂಗಹೋಮ ಮತ್ತು ಅದಕ್ಕೆ ಸೇರಿದ ಧಾನ್ಯದ್ರವ್ಯ, ನೈವೇದ್ಯ ಇವುಗಳನ್ನಲ್ಲದೆ ಮೇಲೆ ಕಂಡ ಯಜ್ಞಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನದ್ರವ್ಯ, ನೈವೇದ್ಯಗಳನ್ನೂ ಹೆಚ್ಚಾಗಿ ಸಮರ್ಪಿಸಬೇಕು.’”

¶ ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.

ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.

ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.