TSK

TSK · ಅರಣ್ಯಕಾಂಡ 29:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಜನರು ಯೆಹೋವನಿಗೆ ಅರ್ಪಿಸುವ ಸಮಾಧಾನಯಜ್ಞದ ನಿಯಮಗಳು ಇವೇ.

ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.

ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”

ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.

ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.