TSK

TSK · ಅರಣ್ಯಕಾಂಡ 29:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ನೀನು ಆರೋನನಿಗೂ ಮತ್ತು ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸು, ‘ಇವು ಸರ್ವಾಂಗಹೋಮ ವಿಷಯವಾದ ನಿಯಮಗಳು: ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮತ್ತು ಮರುದಿನದ ಬೆಳಗಿನ ವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದು ನಂದಬಾರದು.

¶ “ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯದೇಶದವನು ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅದರ ವಿಷಯವಾದ ಆಜ್ಞಾವಿಧಿಗಳ ಪ್ರಕಾರವೇ ಅದನ್ನು ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ನಿಯಮವಿರಬೇಕು.”

¶ “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.

ಇದರ ವಿಷಯದಲ್ಲಿ ನೀನು ಹೇಳಬೇಕಾದುದೇನೆಂದರೆ, ‘ನೀವು ಪ್ರತಿದಿನವೂ ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ವರ್ಷದ ಎರಡು ಕುರಿಮರಿಗಳನ್ನು ಸಮರ್ಪಿಸಬೇಕು.

ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.