TSK

TSK · ಅರಣ್ಯಕಾಂಡ 29:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.

ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.

‹ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.›

‹ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ”› ಎಂದು ಹೇಳಿದನು.

ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.

ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.