ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
TSK
TSK · ಅರಣ್ಯಕಾಂಡ 3:10
Treasury of Scripture Knowledge references in ಕನ್ನಡ IRV.
¶ ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.
ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.
ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.
ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.
ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
¶ ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.
ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’
ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.
¶ ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.