ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
TSK
TSK · ಅರಣ್ಯಕಾಂಡ 3:7
Treasury of Scripture Knowledge references in ಕನ್ನಡ IRV.
ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.
¶ “ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.
ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.
¶ ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
¶ ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.