TSK

TSK · ಅರಣ್ಯಕಾಂಡ 31:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನಂತೂ ಸಮಾಧಾನದೊಡನೆ ಪೂರ್ವಿಕರ ಬಳಿಗೆ ಸೇರುವಿ, ಬಹಳ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.

ಅಬ್ರಹಾಮನು ಪೂರ್ಣಾಯುಷ್ಯದಿಂದ ದಿನತುಂಬಿದ ಮುದುಕನಾಗಿ ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

¶ ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.

ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.

¶ ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.

ನಿನ್ನ ಅಣ್ಣನಾದ ಆರೋನನು ಪೂರ್ವಿಕರ ಬಳಿಗೆ ಸೇರಿದಂತೆಯೇ ನೀನೂ ಆ ದೇಶವನ್ನು ನೋಡಿದ ಮೇಲೆ ಸೇರಬೇಕು.

ಇಲ್ಲಿಯೇ ಸಾಯಬೇಕೆಂದು ಖಂಡಿತವಾಗಿ ಹೇಳಿದನು. ನೀವಾದರೋ ನದಿದಾಟಿ ಆ ಒಳ್ಳೆಯ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅವನ ಕಾಲದವರೆಲ್ಲರೂ ಪೂರ್ವಿಕರ ಬಳಿಗೆ ಸೇರಿದರು. ಆನಂತರ ಯೆಹೋವನನ್ನೂ, ಆತನು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.

ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,

ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.

‹ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.›

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.

ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.

ಅವರು, “ಸರ್ವಶಕ್ತನಾದ ಕರ್ತನೇ, ಪರಿಶುದ್ಧನೂ, ಸತ್ಯವಂತನೂ, ಆಗಿರುವಾತನೇ, ನಮ್ಮ ರಕ್ತವನ್ನು ಸುರಿಸಿದ ಭೂಲೋಕ ನಿವಾಸಿಗಳಿಗೆ ನೀನು ಇನ್ನೆಷ್ಟು ಸಮಯ ನ್ಯಾಯತೀರಿಸದೆಯೂ, ಪ್ರತಿದಂಡನೆ ಮಾಡದೆಯೂ ಇರುವಿ?” ಎಂದು ಮಹಾಶಬ್ದದಿಂದ ಕೂಗಿದರು.

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,