¶ ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
TSK
TSK · ಅರಣ್ಯಕಾಂಡ 32:22
Treasury of Scripture Knowledge references in ಕನ್ನಡ IRV.
ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ನಿಮ್ಮ ಸಹೋದರರು ಸ್ವಾಧೀನಮಾಡಿಕೊಂಡು ಅವರೂ ನಿಮ್ಮಂತೆ ವಿಶ್ರಾಂತಿ ಹೊಂದಿದ ನಂತರ ನಿಮ್ಮ ಸ್ವಂತ ದೇಶಕ್ಕೆ ಹಿಂತಿರುಗಿ, ಮೋಶೆಯು ನಿಮಗೆ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಸ್ವತ್ತಾಗಿ ಕೊಟ್ಟ ದೇಶವನ್ನು ಸ್ವಾಧೀನಪಡಿಸಿಕೊಂಡು ಅದನ್ನು ಅನುಭವಿಸುವಿರಿ” ಎಂದನು.
ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.
ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
¶ ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
¶ ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.