TSK

TSK · ಅರಣ್ಯಕಾಂಡ 32:41

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)

ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.

¶ ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು.