TSK

TSK · ಅರಣ್ಯಕಾಂಡ 34:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ

ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.

ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.

ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.

¶ ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.