TSK

TSK · ಅರಣ್ಯಕಾಂಡ 35:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.

ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.

ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.

ನಿಮ್ಮಲ್ಲಿ ತಿಳಿಯದೆ ಆಕಸ್ಮಾತ್ತಾಗಿ ನರಹತ್ಯಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪ ಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗಿರಲಿ.

ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ

ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ಸಾಯಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.