TSK

TSK · ಅರಣ್ಯಕಾಂಡ 35:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.

ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

“ನಮ್ಮ ನಿವಾಸಕ್ಕೆ ಪಟ್ಟಣಗಳನ್ನೂ ಪಶುಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದಾನಲ್ಲವೆ?” ಅನ್ನಲು

ಲೇವಿಯರು ಯೆಹೋವನಿಗೆ ಯಾಜಕ ಸೇವೆ ಮಾಡದಂತೆ ಯಾರೊಬ್ಬಾಮನೂ ಮತ್ತು ಅವನ ಮಕ್ಕಳೂ ಅವರನ್ನು ಬಹಿಷ್ಕರಿಸಿದ್ದರಿಂದ ಲೇವಿಯರು ತಮ್ಮ ಹುಲ್ಲುಗಾವಲುಗಳಿದ್ದ ತಮ್ಮ ಆಸ್ತಿಗಳನ್ನು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.

¶ ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.

¶ ಯೆಹೂದದ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು. ಅದರ ಅಗಲವು ಇಪ್ಪತ್ತೈದು ಸಾವಿರ ಮೊಳ ಉದ್ದವು, ಪೂರ್ವದಿಂದ ಪಶ್ಚಿಮ ಕುಲಗಳ ಪಾಲುಗಳ ಉದ್ದಕ್ಕೆ ಸಮಾನವಾಗಿದೆ. ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.

ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.