TSK

TSK · ಅರಣ್ಯಕಾಂಡ 35:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ದೇಶವು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸುತ್ತಿದ ಜನರನ್ನು ತ್ಯಜಿಸಿತು.

¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ಹತನಾದ ಮನುಷ್ಯನ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆ ಹೋದರೆ,

ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.

ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.

ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.

ಕಾನಾನ್ಯರ ಮೂರ್ತಿಗಳ ಅರ್ಪಣೆಗೋಸ್ಕರ, ತಮ್ಮ ಮಕ್ಕಳ ನಿರಪರಾಧ ರಕ್ತವನ್ನು ಸುರಿಸಿದರು; ಇಂಥ ಕೊಲೆಗಳಿಂದ ದೇಶವನ್ನು ಹೊಲೆಮಾಡಿದರು.

ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.

ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.

‹ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.›